ಹಾಡಹಗಲೇ ಯುವತಿಯ ಬರ್ಬರ ಹತ್ಯೆ!

ಹಾಡಹಗಲೇ ಯುವತಿಯ ಬರ್ಬರ ಹತ್ಯೆ!

ದಾವಣಗೆರೆ: ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಯುವತಿಯನ್ನು ವಿನೋಬಾನಗರದ ನಿವಾಸಿ ಚಾಂದ್ ಸುಲ್ತಾನಾ (24) ಎಂದು ಗುರುತಿಸಲಾಗಿದೆ. ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ ಆಗಿತ್ತು. ವಿವಾಹಕ್ಕೆ ವಿರೋಧಿಸಿ ಸುಲ್ತಾನಳನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ದಾವಣಗೆರೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.