ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

ನಟ ಶರಣ್ ಇದೀಗ ಮತ್ತೊಂದು ಸಿನಿಮಾದಲ್ಲಿ ಸದ್ದಿಲ್ಲದೇ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಛೂ ಮಂತರ್’ ಎಂದು ಹೆಸರಿಡಲಾಗಿದ್ದು, ಈ ಸಿನಿಮಾದ ನಾಯಕರಾಗಿ ಶರಣ್ ನಟಿಸಿದ್ದರೆ, ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ.