ಹಾಸನದಲ್ಲಿ 2 ಕೋಮುಗಳ ನಡುವೆ ಮಾರಾಮಾರಿ, ಚಾಕು ಇರಿದು ಇಬ್ಬರ ಸ್ಥಿತಿ ಗಂಭೀರ

ಹಾಸನ : ಎರಡು ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಇಬ್ಬರಿಗೆ ಚಾಕು ಇರಿದ ಘಟನೆ ಚನ್ನರಾಯ ಪಟ್ಟಣದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಹಿನ್ನೆಲೆ ಮೆರವಣಿಗೆ ನಡೆದಿದ್ದು, ಈ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಮೆರವಣಿಗೆ ವೇಳೆ ಬಾಗೂರು ಜಾಮಿಯಾ ಮಸೀದಿ ಗುಂಪು ಕಟ್ಟಿಕೊಂಡ ಬಂದು ಯುವಕರ ಜೊತೆ ಕ್ಷುಲ್ಲರ ಕಾರಣಕ್ಕೆ ಜಗಳ ನಡೆಸಿದೆ ಎನ್ನಲಾಗಿದೆ. ನಂತರ ಮುರುಳಿ ಹಾಗೂ ಹರ್ಷ ಎಂಬ ಯುವಕರ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕು ಇರಿಯಲಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಯುವಕರನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎರಡೂ ಸಮುದಾಯದವರಿಂದ ದೂರು ಹಾಗೂ ಪ್ರತಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಲೋಕಾಯುಕ್ತ' ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿ ಹಣ ವಸೂಲಿ : ಆಂಧ್ರ ಮೂಲದ ಖತರ್ನಾಕ್ ಗ್ಯಾಂಗ್ ಅರೆಸ್ಟ್
ಬೆಂಗಳೂರು : ಸರ್ಕಾರಿ ಅಧಿಕಾರಿಗಳನ್ನೇ ವಂಚಿಸಿದ ಗ್ಯಾಂಗ್ ಒಂದು ಬೆದರಿಸಿ ಹಣ ಸುಲಿಗೆ ಮಾಡಿದ ಘಟನೆ ವರದಿಯಾಗಿದೆ. ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಮನೆ ಮೇಲೆ ದಾಳಿ ನಡೆಸುವುದಾಗಿ ಬೆದರಿಸಿ ಗ್ಯಾಂಗ್ ಹಣ ಸುಲಿಗೆ ಮಾಡುತ್ತಿತ್ತು ಎನ್ನಲಾಗಿದೆ.
ಸದ್ಯ, ಸಿದ್ದಾಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಕಡಪ ಜಿಲ್ಲೆಯ ನಾಗೇಶ್ವರ್ ರೆಡ್ಡಿ ಉಪ್ಪಲೂರ್, ಬುಚುಪಲ್ಲಿ ವಿನೀತ್ ಕುಮಾರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಹಾಗೂ ಶಿವಕುಮಾರ್ ರೆಡ್ಡಿ ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ನಗರ ಯೋಜನೆಯ ಜಂಟಿ ನಿರ್ದೇಶಕಿ ಆಶಾ ಭಟ್ ಅವರಿಗೆ ಲೋಕಾಯುಕ್ತ ಅಧಿಕಾರಿ 'ಅಶೋಕ್ ರಾವ್' ಹೆಸರಿನಲ್ಲಿ ಕರೆ ಮಾಡಿ .1 ಲಕ್ಷ ಹಣ ವಸೂಲಿ ಮಾಡಿದ್ದರು. ಈ ಸಂಬಂಧ ಆಶಾ ಭಟ್ ನೀಡಿದ ದೂರಿನ ಮೇರೆಗೆ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ. ಆರೋಪಿಗಳಿಂದ ಐದು ಮೊಬೈಲ್ ಜಪ್ತಿ ಮಾಡಿದ್ದಾರೆ.