ಹುಬ್ಬಳ್ಳಿಯಲ್ಲೂ ಕಾಂಗ್ರೆಸ್ ವಿರುದ್ದ ಪ್ರತಿಭಟನೆ

ಹುಬ್ಬಳ್ಳಿಯಲ್ಲೂ ಕಾಂಗ್ರೆಸ್ ವಿರುದ್ದ ಪ್ರತಿಭಟನೆ

ಸದನದಲ್ಲಿ ಕಾಂಗ್ರೆಸ್  ಕಾಲಹರಣ ಮಾಡಿದೆ‌ ಅಂತಾ ಆರೋಪಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ ಮಾಡ್ತಾಯಿದ್ದು ಹುಬ್ಬಳ್ಳಿಯಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ  ನಡೆಸಿದ್ರು.ದುರ್ಗದ ಬೈಲ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ  ನಡೆಸಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಸಿದ್ಧರಾಮಯ್ಯ ಹಾಗೂ ಡಿಕೆಶಿ ಪ್ರತಿಕೃತಿ ದಹಿಸಿದ್ರು.

ಇನ್ನು, ಇದೇ ವೇಳೆ ಹಿಜಬ್ ಸೇರಿದಂತೆ ಇನ್ನಿತರ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಾ, ಕೋಮು ಪ್ರಚೋದನೆಗೆ ಕಾರಣವಾಗಿದೆ.  ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ . ಆದರೂ ಈಶ್ವರಪ್ಪ ಹೆಸರಲ್ಲಿ ಕಲಾಪದಲ್ಲಿ ಕಾಲಹರಣ ಮಾಡಿದ
ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಅಂತಾ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ರು.