ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಣೆ ; ಪೊಲೀಸ್‌ ಸರ್ಪಗಾವಲು

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಣೆ ; ಪೊಲೀಸ್‌ ಸರ್ಪಗಾವಲು

ಹುಬ್ಬಳ್ಳಿ: ಟಿಪ್ಪು ಜಯಂತಿ ಆಚರಣೆಗೆ ಹು-ಧಾ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಶಸ್ವಿಯಾಗಿ ಟಿಪ್ಪು ಜಯಂತಿ ಮಾಡಲಾಗಿದೆ.

AIMIM ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಟಿಪ್ಪು ಜಯಂತಿ ಆಚರಿಸಲಾಗಿದೆ. AIMIM ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಟಿಪ್ಪು ಸುಲ್ತಾನ್​​ ಪರ ಘೋಷಣೆ ಕೂಗಿ ಟಿಪ್ಪು ಜಯಂತಿ ಆಚರಿಸಿದರು. ಪೊಲೀಸ್​ ಸರ್ಪಗಾವಲಿನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಯಶಸ್ವಿಯಾಗಿ ನೆರವೇರಿದೆ.

ಹು-ಧಾ ಮಹಾನಗರ ಪಾಲಿಕೆ ಹಲವು ಷರತ್ತುಗಳ ವಿಧಿಸಿ ಆಚರಣೆಗೆ ಅನುಮತಿ ನೀಡಿತ್ತು. 10 ಸಾವಿರ ರೂ. ಪಾವತಿಸಬೇಕು, ಟಿಪ್ಪು ಸುಲ್ತಾನ್ ಫೋಟೋ ಬಿಟ್ಟು ಬೇರೆ ಫೋಟೋ ಹಾಕದಂತೆ ಷರತ್ತು ನೀಡಿತ್ತು. ಅದರಂತೆಯೇ AIMIM ಸಂಚಾಲಕ ವಿಜಯ್ ಗುಂಟ್ರಾಳ್​ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ನೆರವೇರಿದೆ. ಕಾರ್ಯಕ್ರಮದಲ್ಲಿ ಅಂಜುಮನ್ ಕಮೀಟಿ ಸದಸ್ಯರು, ಮುಸ್ಲಿಂ ಭಾಂದವರು ಭಾಗಿಯಾಗಿದ್ದು ಟಿಪ್ಪು ಸುಲ್ತಾನ್ ಪರ ಜೈಘೋಷ ಕೂಗಿ ಸಂಭ್ರಮಿಸಿದರು.