ಹುಬ್ಬಳ್ಳಿಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹುಬ್ಬಳ್ಳಿಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಭರ್ಜರಿ ಸಿದ್ದತೆ ಮಾಡಲಾಗಿದ್ದು, ಹುಬ್ಬಳ್ಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರಕ್ಕೆ ಪ್ರಧಾನಿ ಆಗಮನಕ್ಕಾಗಿ ವಾಹನಗಳ ಸಂಚಾರ ವ್ಯವಸೈಯನ್ನೆ ಬದಲಾವಣೆ ಮಾಡಲಾಗಿದೆ ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಕಾರಣಕ್ಕಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಹು-ಧಾ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.