ಕೋಲಾರದತ್ತ ಗಮನ ಹರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಇಂದು ಪ್ರವಾಸ ಕೈಗೊಂಡಿದ್ದಾರೆ. ಹಾಗೂ ವೇಮಗಲ್ ನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಚುನಾವಣೆ ಕಾವು ಹೆಚ್ಚಾಗಿದೆ.
ಹಾಸನದಲ್ಲಿ ಟಿಕೆಟ್ಗಾಗಿ ಜೆಡಿಎಸ್ ಫ್ಯಾಮಿಲಿ ವಾರ್ ಶುರುವಾಗಿದೆ. ಮತ್ತೊಂದೆಡೆ ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು ಏರ್ ಶೋ ಉದ್ಘಾಟಿಸಿದ್ದಾರೆ. ಪ್ರಧಾನಿ ಭೇಟಿಯ ಲಾಭ ಪಡೆಯಲು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಇದರೊಂದಿಗೆ ಕೋಲಾರದತ್ತ ಗಮನ ಹರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಇಂದು ಪ್ರವಾಸ ಕೈಗೊಂಡಿದ್ದಾರೆ. ಹಾಗೂ ವೇಮಗಲ್ ನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಮೂಲಕ ಮಹಿಳೆಯರ ಮತ ಸೆಳೆಯಲು ಮುಂದಾಗಿದ್ದಾರೆ. ರಾಜಕೀಯ ವಲಯದಲ್ಲಾಗುತ್ತಿರುವ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಪಡೆಯಿರಿ.