ಹೊಸ ವರ್ಷಕ್ಕೆ ನಂದಿನಿ ಉತ್ಪನ್ನಗಳ ಮೇಲೆ ಶೇ.20ರಷ್ಟು ಡಿಸ್ಕೌಂಟ್

ಹೊಸ ವರ್ಷ, ಕ್ರಿಸ್ಮಸ್ ಹಾಗೂ ಸಂಕ್ರಾಂತಿ ಹಬ್ಬ ಪ್ರಯುಕ್ತ ‘ನಂದಿನಿ’ ಸಿಹಿ ಉತ್ಪನ್ನಗಳ ಮೇಲೆ ಶೇಕಡ 20ರಷ್ಟು ರಿಯಾಯಿತಿಯನ್ನು ಕರ್ನಾಟಕ ಹಾಲು ಮಹಾಮಂಡಳವು ಪ್ರಕಟಿಸಿದೆ. ಈ ಕೊಡುಗೆಯು ಡಿ. 19ರಿಂದ ಒಂದು ತಿಂಗಳ ಕಾಲ ರಾಜ್ಯದ ಎಲ್ಲೆಡೆ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ. ‘ನಂದಿನಿ’ ಸಿಹಿ ಉತ್ಪನ್ನಗಳಾದ ಮೈಸೂರ್ ಪಾಕ್, ಪೇಡಾ, ಧಾರವಾಡ ಪೇಡ, ಕೇಸರ್ ಪೇಡ, ಏಲಕ್ಕಿ ಪೇಡ, ವಿವಿಧ ಬರ್ಫಿಗಳು, ಕುಂದಾ, ಜಾಮೂನ್, ರಸಗುಲ್ಲಾ, ಸಿರಿಧಾನ್ಯ ಲಾಡು, ಸಿರಿಧಾನ್ಯ ಹಾಲಿನ ಪುಡಿ, ಚಕ್ಕಿ ಲಾಡು ಸೇರಿ ಎಲ್ಲ ಸಿಹಿ ಉತ್ಪನ್ನ ಮೇಲೆ ಶೇ 20ರಷ್ಟು ರಿಯಾಯಿತಿ ಸಿಗಲಿದೆ.