ಪ್ರತಿಶಾಲೆಗೂ 10 ಲಕ್ಷ ರೂ. ಪ್ರೋತ್ಸಾಹ ಧನ | Gundlupet |

ದೇಶದ ಮೊದಲ ರಾಷ್ಟ್ರಪತಿ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವಾದ ಶಿಕ್ಷಕರ ದಿನಾಚಾರಣೆಯನ್ನು ಗುಂಡ್ಲುಪೇಟೆಯ ಶಿಕ್ಷಕರ ಭವನದಲ್ಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ದೀಪಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿ, ಹರಮುನಿದರೆ ಗುರು ಕಾಯುವನು ಎಂಬ ಮಾತಿದೆ, ಭಾರತೀಯ ಪರಂಪರೆಯಲ್ಲಿ ಶ್ರೇಷ್ಠತೆಯ ಸ್ಥಾನದಲ್ಲಿ ಗುರುಗಳು ನಿಲ್ಲುತ್ತಾರೆ. ಕ್ಷೇತ್ರದ ಶಾಲೆಗಳಲ್ಲಿ ನಾಲ್ಕು ಶಾಲೆಗಳನ್ನು ಅಮೃತಯೋಜನೆಯಡಿ ಆಯ್ಕೆ ಮಾಡಲಾಗಿದೆ. ಪ್ರತಿಶಾಲೆಗೂ 10 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ಈಗಿನ ಕಾಲಘಟ್ಟದಲ್ಲಿ ಎಲ್ಲಾ ಹೋಬಳಿ ವ್ಯಾಪ್ತಿಯಲ್ಲೂ ಆಂಗ್ಲ ಮಾಧ್ಯಮ ಶಾಲೆಗಳು ಪ್ರಾರಂಭಗೊಂಡಿವೆ ಬಹುಮುಖ್ಯವಾಗಿ ಆಂಗ್ಲ ಮಾಧ್ಯಮ ಬೋಧನೆ ಸರ್ಕಾರಿ ಶಾಲೆಯಲ್ಲಿ ಸಿಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.