10 ದಿನದೊಳಗೆ ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ : ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

10 ದಿನದೊಳಗೆ ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ : ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, 10 ದಿನದೊಳಗೆ ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆ ಅಂಗನವಾಡಿ ಕಾರ್ಯಕರ್ತರು ತಮ್ಮ ಲಗೇಜು ಸಮೇತ ರಸ್ತೆಯಲ್ಲೇ ಮಲಗುತ್ತಿದ್ದಾರೆ. .ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಕ್ರೋಶ ಹೊರ ಹಾಕುತ್ತಿದ್ದು, ಇಂದು ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ.

ಗುಜರಾತ್ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುವಿಟಿ ಯೋಜನೆ ಜಾರಿ ಮಾಡಿದ್ದು, ಕರ್ನಾಟಕದಲ್ಲೂ ಸರ್ಕಾರ ಜಾರಿ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ. ಇದಲ್ಲದೇ ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ