ಇನ್ನು 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ನೀರಾವರಿ ಯೋಜನೆಗಳನ್ನು ಈಡೇರಿಸಿ ರಾಜ್ಯದ ರೈತರು, ಸಾಮಾನ್ಯ ಜನರ ಬದುಕು ಹಸನಾಗಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊಡಕಲ್(ಯಾದಗಿರಿ): ಇನ್ನು 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ನೀರಾವರಿ ಯೋಜನೆಗಳನ್ನು ಈಡೇರಿಸಿ ರಾಜ್ಯದ ರೈತರು, ಸಾಮಾನ್ಯ ಜನರ ಬದುಕು ಹಸನಾಗಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ನ ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಿ ಜೊತೆ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ಸಚಿವ ಗೋವಿಂದ ಕಾರಜೋಳ, ಶಾಸಕರಾದ ರಾಜುಗೌಡ, ಎ.ಎಸ್.ಪಾಟೀಲ್ ನಡಹಳ್ಳಿ ಉಪಸ್ಥಿತರಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ದಶಕವನ್ನು ನೀರಾವರಿ ದಶಕ ಎಂದು ಘೋಷಿಸಿ ಹೆಚ್ಚು ಸಂಪನ್ಮೂಲ, ಹಣ ಒದಗಿಸಿ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡುತ್ತೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರುತ್ತಿದೆ.4.5 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಕೊನೆಯ ಹಂತದಲ್ಲಿ ನೀರು ತಲುಪುತ್ತಲೇ ಇರಲಿಲ್ಲ. ಇಂದು ಎಲ್ಲ ಶಾಖಾ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತದೆ. ಈ ಯೋಜನೆಯು ಹೀಗಾಗಿ ಬಹಳ ಮುಖ್ಯವಾಗುತ್ತದೆ. ನಮ್ಮ ನಾಲೆಗಳಲ್ಲಿ ಶೇಕಡಾ 20ರಷ್ಟು ಹೆಚ್ಚು ನೀರು ಹರಿಸಲು ಸಾಧ್ಯವಾಗುತ್ತಿದೆ.ನೀರು ಹರಿಯುವ ಸಮಗ್ರ ಮಾಹಿತಿ ದಾಖಲಾಗುವುದರಿಂದ ನಿರ್ವಹಣೆ ಸುಲಭವಾಗುತ್ತದೆ. ಪ್ರಧಾನಿ ಮೋದಿಯವರು ಯಾದಗಿರಿ ಜಿಲ್ಲೆಯ ಹಳ್ಳಿಗಳಿಗೆ ನೀರೊದಗಿರುವ ನಾರಾಯಣಪುರ ಎಡದಂಡೆ ಕಾಲುವೆಯ ಸ್ಕಾಡಾ ಗೇಟ್ ಗಳಿಗೆ ಚಾಲನೆ ನೀಡಿದರು. ಪ್ರತಿ ಹನಿ ನೀರನ್ನೂ ಸಮಗ್ರವಾಗಿ ಬಳಸಬೇಕು ಎಂಬ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆ ಆರಂಭವಾಗಿತ್ತು.
ಆದರೆ ನಂತರ ಯುಪಿಎ ಸರ್ಕಾರದಿಂದ ನಮಗೆ ಬರಬೇಕಿದ್ದ ಈ ಯೋಜನೆ ತಡವಾಯಿತು. ಮುಂದೆ 2014ರಲ್ಲಿ ಮೋದಿ ಪ್ರಧಾನಿಯಾದ ನಂತರ 2015ರಲ್ಲಿ ತ್ವರಿತಗತಿಯ ಯೋಜನೆಯಲ್ಲಿ ಈ ಕಾಮಗಾರಿ ಆರಂಭವಾಯಿತು ಎಂದು ಸಿಎಂ ಬೊಮ್ಮಾಯಿ ಹೇಳಿದರು.