100 ಶತಕ ಗಳಿಸುವ ಸಾಕಷ್ಟು ಅವಕಾಶ ಹೊಂದಿದ್ದಾರೆ ವಿರಾಟ್ ಕೊಹ್ಲಿ : ಶೇನ್ ವಾಟ್ಸನ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೂರು ಶತಕ ಬಾರಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾಟ್ಸನ್ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗಾವಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಶತಕ ಸಿಡಿಸಿದರು.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವಾಟ್ಸನ್, 'ಅವರು (ವಿರಾಟ್ ಕೊಹ್ಲಿ) ನಂಬಲಸಾಧ್ಯವಾದದ್ದನ್ನು ಸಾಧಿಸಿದ್ದಾರೆ. ಸಾಧಿಸುವುದನ್ನು ಮುಂದುವರಿಸಲಿದ್ದಾರೆ. ಟೆಸ್ಟ್‌ನಲ್ಲಿ ಟೆಸ್ಟ್‌ನಲ್ಲಿ ಶತಕ ಸಿಡಿಸಲು ಸಮಯ ತೆಗೆದುಕೊಂಡರು. ಅವರು ಶ್ರೇಷ್ಠ ಆಟಗಾರ. ಖಂಡಿತ ಮತ್ತೊಂದು ಶತಕ ಬಾರಿಸಲಿದ್ದಾರೆ. ಅವರೊಬ್ಬ ಅದ್ಭುತ ಆಟಗಾರ' ಎಂದು ಹೇಳಿದ್ದಾರೆ.
'ವಿರಾಟ್ ಅವರ ದಾಖಲೆಗಳೇ ಎಲ್ಲವನ್ನೂ ಹೇಳುತ್ತವೆ. ಅವರು ಸದ್ಯ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ. ಅವರ ಅಂಕಿ-ಅಂಶಗಳನ್ನು ನೋಡಿದರೆ ನಂಬುವುದೇ ಕಷ್ಟವಾಗುತ್ತದೆ. ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೂರು ಶತಕಗಳನ್ನು ಗಳಿಸುವ ಸಾಕಷ್ಟು ಅವಕಾಶಗಳನ್ನು ಹೊಂದಿದ್ದಾರೆ. ಈ ಸಾಧನೆ ಮಾಡಿರುವ ಏಕೈಕ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್. ಅಸಾಧಾರಣ ಆಟಗಾರನಾಗಿರುವ ವಿರಾಟ್, ಅವರೊಂದಿಗೆ (ಸಚಿನ್ ಜೊತೆ) ಸಾಕಷ್ಟು ವರ್ಷ ಆಡಿದ್ದಾರೆ' ಎಂದಿದ್ದಾರೆ.