102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾದ ಜನಾರ್ದನ ರೆಡ್ಡಿ

102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾದ ಜನಾರ್ದನ ರೆಡ್ಡಿ

ಬಳ್ಳಾರಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಸಿದ್ದತೆ ನಡೆಸಿದ್ದಾರೆ. ಜ.3ರಂದು ಗಂಗಾವತಿಗೆ ಆಗಮಿಸಲಿರುವ ಜನಾರ್ದನ ರೆಡ್ಡಿ ಕೂಡ ಬೂದು ಕ್ರಾಸ್‌ನಿಂದ 10 ಸಾವಿರ ಜನರೊಂದಿಗೆ ಬೃಹತ್‌ ಮೆರವಣಿಗೆ ನಡೆಸಿ ಪ್ರಚಾರ ಕೈಗೊಳ್ಳಲಿದ್ದಾರೆ. ಜ.16ರಂದು ಉತ್ತರ ಕರ್ನಾಟಕದ 25 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಿದ್ದಾರೆ. ಫೆ.14ರಂದು ಬಳ್ಳಾರಿಯಲ್ಲೇ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ.