123 ಸ್ಥಾನ ಗೆಲ್ತೇವೆ, ಸಂಘಟನೆಗಳೊಂದಿಗೆ ಹೊಂದಾಣಿಕೆಗೂ ಸಿದ್ಧ; ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಯೋಜನೆ ರೂಪಿಸಕೊಳ್ಳುತ್ತಿವೆ. ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನದ ಗುರಿ ಮುಟ್ಟಲು ಜೆಡಿಎಸ್ಗೆ ಅವಕಾಶ ಇದೆ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಜೆಡಿಎಸ್ಗೆ ಅಭ್ಯರ್ಥಿಗಳ ಕೊರತೆ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರು ನಾವು 150 ಸ್ಥಾನ ಗುರಿ ತಲುಪುತ್ತದೆ ಎಂದು ಹೇಳುತ್ತಿದ್ದಾರೆ. ಒಂದೆಡೆ ಸಿದ್ದರಾಮಯ್ಯನವರು ಸ್ಪರ್ಧಿಸಲು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 224 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಹೀಗಾಗಿ 123 ಸ್ಥಾನ ಗೆಲ್ಲುವ ಅವಕಾಶ ಇದೆ. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನಮ್ಮೆಲ್ಲರಿಗೂ ಸಿಗಲಿದೆ. ಯಾವುದಾದರು ಸಂಘಟನೆಗಳು ನಮ್ಮ ಜೊತೆಗೆ ಚರ್ಚೆ ಮಾಡಿದರೆ ನಾಲ್ಕೈದು ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದರು.
ಕೆಲವು ಪಕ್ಷಗಳು ನಮ್ಮ ಪಕ್ಷದವರನ್ನು ಸೆಳೆಯುವ ಯತ್ನ ಮಾಡಿವೆ. ಬೇರೆ ಪಕ್ಷದ ಸೆಳೆತ ಇದ್ದವರು ಈಗಾಗಲೇ ಹೊರಹೋಗಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಬಹಳಷ್ಟು ಜನ ನಮ್ಮ ಪಕ್ಷದ ಕದ ತಟ್ಟುವ ನಂಬಿಕೆ ಇದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.