13,000 ಕೋಟಿ ವೆಚ್ಚದ ಏಷ್ಯಾದ ಮೊದಲ ಗಾರ್ಡನ್ ಟರ್ಮಿನಲ್ ಉದ್ಘಾಟನೆ
ಬೆಂಗಳೂರಿನ ; ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಏಷ್ಯಾದ ಮೊದಲ ಗಾರ್ಡನ್ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, 13 ಸಾವಿರ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಅತ್ಯಾಧುನಿಕ ತಂತ್ರಜ್ಞಾನದ ಟರ್ಮಿನಲ್ ಗಾರ್ಡನ್ ಅನ್ನು ಲೋಕಾಪರ್ಣೆ ಮಾಡಿದರು.
2.55 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಬೃಹತ್ ಟರ್ಮಿನಲ್ ಇದಾಗಿದ್ದು, ಏಷ್ಯಾದಲ್ಲೇ ಅತೀ ದೊಡ್ಡ ಗಾರ್ಡನ್ ಟರ್ಮಿನಲ್ ಎಂಬ ಗೌರವಕ್ಕೆ ಪಾತ್ರವಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾದ ಟರ್ಮಿನಲ್ ನಲ್ಲಿ ಸುಮಾರು 2 ಕೋಟಿ ಪ್ರಯಾಣಿಕರು ಭೇಟಿ ನೀಡಬಹುದಾಗಿದೆ.