ಜಿಲ್ಲೆಗೊಂದು ಗೋಶಾಲೆ ತೆರೆಯಲು ₹ 15 ಕೋಟಿ ಬಿಡುಗಡೆ

ಜಿಲ್ಲೆಗೊಂದು ಗೋಶಾಲೆ ತೆರೆಯಲು ₹ 15 ಕೋಟಿ ಬಿಡುಗಡೆ

ಬೆಂಗಳೂರು: ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ಗೋಹತ್ಯೆ ನಿಷೇಧ) ಕಾಯ್ದೆ ಅನುಷ್ಠಾನಕ್ಕೆ ಪೂರಕವಾಗಿ ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆಗಳನ್ನು ಆರಂಭಿಸಲು ಪಶುಸಂಗೋಪನಾ ಇಲಾಖೆಯು ₹ 15 ಕೋಟಿ ಅನುದಾನ ಬಿಡುಗಡೆ ಮಾಡಿ ಆಗಸ್ಟ್‌ 11ರಂದು ಆದೇಶ ಹೊರಡಿಸಿದೆ.

ಅಕ್ಟೋಬರ್‌ 2ರ ಒಳಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಗೋಶಾಲೆ ಆರಂಭಿಸಬೇಕು. ಇದಕ್ಕಾಗಿ ಪ್ರತಿ ಜಿಲ್ಲೆಗೆ ತಲಾ ₹ 24 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು.

ಗೋಶಾಲೆಗಳ ನಿರ್ಮಾಣದಲ್ಲಿ ಕೊಟ್ಟಿಗೆ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಮೇವು ಉತ್ಪಾದನೆ ಮತ್ತಿತರ ಚಟುವಟಿಕೆಗಳಿಗೆ ಇತರೆ ಯೋಜನೆಗಳನ್ನೂ ಬಳಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸುವುದು ಅಥವಾ ಖಾಸಗಿ ಸಂಸ್ಥೆಗಳಿಂದ ನಡೆಯುತ್ತಿರುವ ಗೋಶಾಲೆಗಳ ವಿಸ್ತರಣೆ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಗಳು ತೀರ್ಮಾನ ಕೈಗೊಳ್ಳಬೇಕು.