15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ : ಶೀಘ್ರವೇ ಷರತ್ತಿನೊಂದಿಗೆ ಅಂತಿಮ ಪಟ್ಟಿ ಪ್ರಕಟ!

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ : ಶೀಘ್ರವೇ ಷರತ್ತಿನೊಂದಿಗೆ ಅಂತಿಮ ಪಟ್ಟಿ ಪ್ರಕಟ!

ಬೆಂಗಳೂರು : ಸರ್ಕಾರಿ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೈಕೋರ್ಟ್ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನ ಮೇಲೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ ಶೀಘ್ರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಆದರೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವುದು ನಿಯಮಬಾಹಿರ ಎಂದು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಅಂತಹ ಅಭ್ಯರ್ಥಿಗಳನ್ನು ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಕೆಲವು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೈಕೋರ್ಟ್ ಈ ಬಗ್ಗೆ ಮಧ್ಯಂತರ ಆದೇಶ ನೀಡಿದ್ದು, ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಿ ಜೊತೆಗೆ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನೊಂದಿಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸೂಚಿಸಿದೆ.