17 ಕನ್ನಡಿಗರಿಗೆ ನೋಟಿಸ್ ನೀಡಿದ ಮಹಾರಾಷ್ಟ್ರ ಸರ್ಕಾರ

17 ಕನ್ನಡಿಗರಿಗೆ ನೋಟಿಸ್ ನೀಡಿದ ಮಹಾರಾಷ್ಟ್ರ ಸರ್ಕಾರ

ಬೆಳಗಾವಿ: ಕರ್ನಾಟಕ ಸೇರಲು ನಿರ್ಧರಿಸಿದ್ದ ಉಡುಗಿ ಗ್ರಾಮದ 17 ಮಂದಿಗೆ ನೋಟಿಸ್‌ ಜಾರಿ ಮಾಡುವ ಮೂಲಕ ಮಹಾರಾಷ್ಟ್ರ ಸರ್ಕಾರ ಒತ್ತಡ ಹಾಕುವ ತಂತ್ರಕ್ಕೆ ಮುಂದಾಗಿದೆ. ಕರ್ನಾಟಕ ಸೇರ ಬಯಸುವ ಹೋರಾಟ ನಡೆಸುವ ಮೊದಲು ಪೊಲೀಸರಿಗೆ ಸೂಚಿಸಬೇಕು ಎಂದು ನೋಟಿಸ್‌‌ನಲ್ಲಿ ಸೂಚಿಸಲಾಗಿದೆ. ಕರ್ನಾಟಕ ರಾಜ್ಯ ಸೇರ್ಪಡೆಗೆ ಠರಾವು ಪಾಸ್‌ ಮಾಡಿದ್ದ ಉಡುಗಿ ಗ್ರಾಮದ ಜನರು ಗ್ರಾಮದಲ್ಲಿ ಕನ್ನಡ ಧ್ವಜ ಹಾರಿಸಿ ಕನ್ನಡ ಪರ ಘೋಷಣೆ ಕೂಗಿದ್ದರು.