18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಭಾರತ್ ಬಯೋಟೆಕ್‌ನ ನಾಸಲ್ ವ್ಯಾಕ್ಸಿನ್

ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ಔಷಧ ನಿಯಂತ್ರಣ ಪ್ರಾಧಿಕಾರ ಈಗಾಗಲೇ ಅನುಮೋದನೆ ನೀಡಿದ್ದು, 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಇದನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ನಾಸಲ್ ಲಸಿಕೆಗೆ ದರ ನಿಗದಿಪಡಿಸುವ ಕಾರ್ಯ ನಡೆಯುತ್ತಿದ್ದು, ಬಳಿಕ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಈಗಾಗಲೇ ಕೋ ವ್ಯಾಕ್ಸಿನ್ ಲಸಿಕೆ ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.