೧ ರಿಂದ ೮ ತರಗತಿ ಆರಂಭ: ಪಾಲಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

೧ ರಿಂದ ೮ ತರಗತಿ ಆರಂಭ: ಪಾಲಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ
ಬೆಂಗಳೂರು:ಕರ್ನಾಟಕದಲ್ಲಿ ೧ರಿಂದ ೮ ತರಗತಿ ಶಾಲಾರಂಭಕ್ಕೆ ಸಂಬAಧಿಸಿದAತೆ ಅಂಕಿ-ಅAಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಇದೇ ಸಮಯದಲ್ಲಿ ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಒಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಸ್ಟ್ ೨೩ರಿಂದ ರಾಜ್ಯದಲ್ಲಿ ೯ ರಿಂದ ೧೨ನೇ ತರಗತಿ ಆರಂಭಿಸಲಾಗುತ್ತಿದೆ. ೧ ರಿಂದ ೮ ತರಗತಿ ಶಾಲಾರಂಭ ಮಾಡುವ ಕುರಿತು ಸರಕಾರ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ಮಕ್ಕಳ ಪಾಲಕರ ಅಭಿಪ್ರಾಯ ಮುಖ್ಯವಾಗಿದೆ. ಹೀಗಾಗಿ ಎಲ್ಲಾ ಬಿಇಒಗಳ ಮೂಲಕ ಪಾಲಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಂತರದಲ್ಲಿ ಯಾವಾಗ ಆರಂಭ ಮಾಡಬೇಕು ಎಂಬುದರ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಾಲೆಗಳನ್ನು ತೆರೆಯುವ ಕುರಿತು ಅಗಸ್ಟ್ ೩೦ರ ಒಳಗೆ ಸಭೆ ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.