2,000 RS ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ: BJP ಸಂಸದ ಆಗ್ರಹ

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವಂತೆ ಬಿಜೆಪಿ ಸಂಸದ ಸುಶೀಲ್ ಮೋದಿ ಸಂಸತ್ತಿನಲ್ಲಿ ಆಗ್ರಹಿಸಿದ್ದಾರೆ. ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, 2000 ರೂ. ಮುಖಬೆಲೆಯ ನೋಟುಗಳು ದೇಶದ ಬಹುತೇಕ ಎಟಿಎಂಗಳಿಂದ ಕಣ್ಮರೆಯಾಗಿವೆ. ಈ ನೋಟುಗಳು ಭಯೋತ್ಪಾದಕ ನಿಧಿ , ಮಾದಕವಸ್ತು ಕಳ್ಳಸಾಗಣೆ ಮತ್ತು ಕಪ್ಪುಹಣಕ್ಕೆ ಬಳಕೆಯಾಗುತ್ತಿದೆ ಎಂಬ ಮಾಹಿತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.