ರಾಜ್ಯದ ಖಾಸಗಿ ಶಾಲೆಗಳಲ್ಲಿ 2021-22 ಶೈಕ್ಷಣಿಕ ವರ್ಷದ ಪಠ್ಯ ಕಡಿತ?

ರಾಜ್ಯದ ಖಾಸಗಿ ಶಾಲೆಗಳಲ್ಲಿ 2021-22 ಶೈಕ್ಷಣಿಕ ವರ್ಷದ ಪಠ್ಯ ಕಡಿತ?

ಬೆಂಗಳೂರು : ಲಾಕ್ ಡೌನ್ ನಿಂದಾಗಿ (Lockdown) ಕಳೆದುಹೋದ ಶೈಕ್ಷಣಿಕ ದಿನಗಳ ಸಂಖ್ಯೆಯನ್ನು ಪರಿಗಣಿಸಿ ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮವನ್ನು ಕಡಿತ ಮಾಡುವಂತೆ ಖಾಸಗಿ ಶಾಲಾ ಆಡಳಿತ ಮಂಡಳಿ (Private state board) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಬರೆದ ಪತ್ರದಲ್ಲಿ, ಕರ್ನಾಟಕದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಕ್ರಮವನ್ನು ಕಡಿತ ಮಾಡುವಂತೆ ಕೋರಿವೆ ಎನ್ನಲಾಗಿದೆ.

ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಪಠ್ಯಕ್ರಮವನ್ನು ಶೇಕಡಾ 30 ರಷ್ಟು ಕಡಿಮೆ ಮಾಡಲಾಗಿದೆ ಮತ್ತು ಈ ವರ್ಷವೂ ಅದರ ಅಗತ್ಯವಿದೆ. ಇತ್ತೀಚೆಗೆ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭಗೊಂಡಿವೆ ಮತ್ತು ವಿದ್ಯಾರ್ಥಿಗಳು ಇಡೀ ಪಠ್ಯಕ್ರಮವನ್ನು ಅಧ್ಯಯನ ಮಾಡುವುದು ಮತ್ತು ಪರೀಕ್ಷೆಗಳನ್ನು ಎದುರಿಸುವುದು ಕಷ್ಟವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.