2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ಗೆ 130 ಸ್ಥಾನ: ಪ್ರಿಯಾಂಕ್ ಖರ್ಗೆ

2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ಗೆ 130 ಸ್ಥಾನ: ಪ್ರಿಯಾಂಕ್ ಖರ್ಗೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಆಂತರಿಕ ಸಮೀಕ್ಷೆಯ ಭವಿಷ್ಯ ನುಡಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ. ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಆಂತರಿಕ ಸಮೀಕ್ಷೆಯ ಭವಿಷ್ಯ ನುಡಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತಮ್ಮ ಪಕ್ಷ 106 ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿದ್ದು, ಖಂಡಿತವಾಗಿಯೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ, ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.ಇದೇ ವೇಳೆ ಒಬ್ಬ ಗೃಹಿಣಿಗೆ ಮಾಸಿಕ 2,000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಕಾರ್ಯಸಾಧುವಲ್ಲ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮತ್ತು ಇತರ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಶೇ.80 ಕ್ಕೂ ಹೆಚ್ಚು ಆಶ್ವಾಸನೆಗಳನ್ನು ಪೂರೈಸಿದೆ. “ನಾವು ಅಧಿಕಾರಕ್ಕೆ ಬಂದರೆ, ನಾವು ಅದನ್ನು ಖಂಡಿತವಾಗಿಯೂ ಜಾರಿಗೆ ತರುತ್ತೇವೆ. ಬಿಜೆಪಿಯವರು ನೀಡಿದ ಆಶ್ವಾಸನೆಗಳು ಮತ್ತು ಕಳೆದ ಮೂರು ವರ್ಷಗಳಲ್ಲಿ ಯಾವೆಲ್ಲಾ ಭರವಸೆಗಳನ್ನು ಪೂರೈಸಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲಿ ಎಂದು ತಿಳಿಸಿದರು. ಬಳಿಕ ಬಂಜಾರ ಸಮುದಾಯಕ್ಕೆ ಭೂ ಹಕ್ಕುಪತ್ರ ವಿತರಿಸಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದಕ್ಕೆ ಬಿಜೆಪಿಯನ್ನು ಲೇವಡಿ ಮಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಯೋಜನೆಗಳನ್ನು ಯಾವ ಕಾರಣಕ್ಕೆ ಹಿಂಪಡೆಯಲಾಯಿತು ಮತ್ತು ಕಲಬುರಗಿಯ ರೈಲ್ವೆ ವಿಭಾಗದ ಕಾಮಗಾರಿಯನ್ನು ಏಕೆ ಪುನರಾರಂಭಿಸಿಲ್ಲ ಎಂಬುದನ್ನು ಕಮಲ ಪಾಳ್ಯದ ನಾಯಕರು ವಿವರಿಸಬೇಕಿದೆ ಎಂದರು.