2024 ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ: ಅಮಿತ್ ಶಾ ಮಹತ್ವದ ಹೇಳಿಕೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಎರಡು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತೊಂದು ಅವಧಿಗೂ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರಾ ಎಂಬ ಪ್ರಶ್ನೆ ಕೇಳಿ ಬರುತ್ತಿತ್ತು.ಇದೀಗ ಈ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದು, '2024 ರ ಲೋಕಸಭಾ ಚುನಾವಣೆಯ ಬಳಿಕ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ' ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.