2024ರ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಚಂದ್ರಬಾಬು ನಾಯ್ಡು

2024ರ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಚಂದ್ರಬಾಬು ನಾಯ್ಡು

2024ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬರದಿದ್ದರೆ, ಅದು ನನ್ನ ಕೊನೆಯ ಚುನಾವಣೆಯಾಗಬಹುದು ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಕರ್ನೂಲ್‍ನಲ್ಲಿ ಮಾತನಾಡಿದ ಅವರು, ವಿಧಾನಸಭೆಗೆ ಪ್ರವೇಶಿಸುವುದಿಲ್ಲ ಎಂಬ ನಿರ್ಧಾರವನ್ನು ತಿಳಿಸಿದ್ದಾರೆ. ನಾನು ವಿಧಾನಸಭೆಗೆ ಹೋಗಬೇಕಾದರೆ, ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ನಾನು ರಾಜಕೀಯದಲ್ಲಿ ಇರಬೇಕೆಂದು ಹೇಳುತ್ತೇನೆ. ನನ್ನನ್ನು ಗೆಲ್ಲಿಸದಿದ್ದರೆ 2024ರ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದಿದ್ದಾರೆ.