2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ; ಕಮಲನಾಥ್ ಅಚ್ಚರಿಯ ಹೇಳಿಕೆ

2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ; ಕಮಲನಾಥ್ ಅಚ್ಚರಿಯ ಹೇಳಿಕೆ
2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗಿರುವುದಿಲ್ಲ. ಅವರು ಪ್ರಧಾನಿ ಅಭ್ಯರ್ಥಿಯೂ ಆಗಿರುತ್ತಾರೆ ಎಂದು ಕಮಲನಾಥ್ ಹೇಳಿದ್ದಾರೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ  ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಭವಿಷ್ಯ ನುಡಿದಿದ್ದಾರೆ.

ದೇಶಾದ್ಯಂತ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ಕಮಲನಾಥ್ಯನ್ನು ಶ್ಲಾಘಿಸಿದ್ದಾರೆ. ರಾಹುಲ್ ಗಾಂಧಿ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಅವರು ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.