2500 ಪ್ರೌಢ ಶಾಲೆ ಶಿಕ್ಷಕರು, 778 ಪಿಯು ಉಪನ್ಯಾಸಕರ ನೇಮಕಾತಿ: ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ 2500 ಪ್ರೌಢ ಶಾಲಾ ಶಿಕ್ಷಕರು, 778 ಪಿಯು ಕಾಲೇಜು ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಶಿಕ್ಷಕರು, ಉಪನ್ಯಾಸಕರ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಹಸಿರು ನಿಶಾನೆ ತೋರಿದೆ.
ಹೀಗಾಗಿ ಶೀಘ್ರವೇ ಶಿಕ್ಷಕರ ಭರ್ತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದರು. ಈಗಾಗಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತದೆ. ಈ ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು, ಉಪನ್ಯಾಸಕರ ಸೇವೆ ಪಡೆಯಲಾಗಿದೆ ಎಂದು ಸಚಿವರು ಹೇಳಿದ್ದಾರೆ.