29 ಹೊಸ ಪಿಯು ಕಾಲೇಜುಗಳು ಮಂಜೂರು

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 29 ಹೊಸ ಪದವಿಪೂರ್ವ ಕಾಲೇಜುಗಳನ್ನು ಆರಂಭಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮಂಜೂರಾತಿ ನೀಡಿದೆ.
ಯಾದಗಿರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 2, ಕೊಪ್ಪಳ ಜಿಲ್ಲೆಯಲ್ಲಿ 3, ರಾಯಚೂರು, ಉಡುಪಿ, ಹಾವೇರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ 1, ವಿಜಯಪುರ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 5, ಬೆಳಗಾವಿ ಜಿಲ್ಲೆಯಲ್ಲಿ 10 ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ.