3 ದಿನದೊಳಗೆ 44 ನ್ಯಾಯಮೂರ್ತಿಗಳ ನೇಮಕ: ಸುಪ್ರೀಂಗೆ ಕೇಂದ್ರದ ಭರವಸೆ

ಸುಪ್ರೀಂಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಬಾಕಿ ಇರುವ ನೇಮಕ ಪ್ರಕ್ರಿಯೆಯನ್ನು 3 ದಿನದೊಳಗೆ ಮುಗಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ನ 44 ನ್ಯಾಯಮೂರ್ತಿಗಳ ಕೊಲಿಜಿಯಂ ಶಿಫಾರಸು ಕೇಂದ್ರ ಸರ್ಕಾರದ ಮುಂದಿದೆ, ನ್ಯಾಯಮೂರ್ತಿಗಳ ನೇಮಕ ವಿಳಂಬಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನೇಮಕಕ್ಕೆ ನೆಲಸ ಕಾನೂನನ್ನು ಪಾಲಿಸುವುದು ಅತ್ಯಗತ್ಯ ಎಂದು ಹೇಳಿದ ಬೆನ್ನಲ್ಲೇ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ.