3 ರಾಜ್ಯಗಳಿಗೆ ಇಂದು ಮಧ್ಯಾಹ್ನ ಚುನಾವಣಾ ದಿನಾಂಕ ಘೋಷಣೆ

3 ರಾಜ್ಯಗಳಿಗೆ ಇಂದು ಮಧ್ಯಾಹ್ನ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಮಧ್ಯಾಹ್ನ 2.30ಕ್ಕೆ ಪತ್ರಿಕಾಗೋಷ್ಠಿ ನಡೆಯಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮೂರು ರಾಜ್ಯಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾವ ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಯಲಿದೆ? ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆ.