ಜ. 29ಕ್ಕೆ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೆ ಸಿದ್ಧತೆ : 300 ವಾಹನ ಜಾಥಾ, 100 ಕಟೌಟ್, ಸಾವಿರ ದೀಪೋತ್ಸವ

ಜ. 29ಕ್ಕೆ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೆ ಸಿದ್ಧತೆ : 300 ವಾಹನ ಜಾಥಾ, 100 ಕಟೌಟ್, ಸಾವಿರ ದೀಪೋತ್ಸವ

ಮೈಸೂರು : ಜ. 29ರಂದು ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ (Dr. Vishnuvardhan) ಸ್ಮಾರಕ ಲೋಕಾರ್ಪಣೆ ಭರ್ಜರಿ ಸಿದ್ದತೆ ಮಾಡಲಾಗಿದೆ, ಈಗಾಗಲೇ 300 ವಾಹನ ಜಾಥಾ, 100 ಕಟೌಟ್, ಸಾವಿರ ದೀಪೋತ್ಸವ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಹೆಚ್.ಡಿ ಕೋಟೆ ಅಲ್ಲಾಳು ಗ್ರಾಮದಲ್ಲಿ‌ 5 ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.ಇದರಲ್ಲಿ ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ, ಸ್ಮಾರಕದಲ್ಲಿ ಒಳಗೊಂಡಿದೆ.

ವಿಷ್ಣು ದಾದಾ ಅಗಲಿದ 13 ವರ್ಷಗಳ ಬಳಿಕ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆ‌.15 ರಂದು ಸ್ಮಾರಕಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮಾರಕಕ್ಕೆ ಭೂಮಿ‌ ಪೂಜೆ ನೆರವೇರಿಸಿದ್ದರು. ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಆಗಲೇ 11 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಸುಮಾರು 13 ವರ್ಷಗಳ ಬಳಿಕ ಸ್ಮಾರಕ ಉದ್ಘಾಟನೆ ಸಂಭ್ರದಲ್ಲಿ ಮೈಸೂರು ರಸ್ತೆಯಲ್ಲಿ ವಿಷ್ಣುವರ್ಧನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.

ರಾಜ್ಯಾದ್ಯಂತ ಗೋಡೆಗಳ ಮೇಲೆ ವಿಷ್ಣುವರ್ಧನ್ ಸ್ಮಾರಕದ ಪೋಸ್ಟರ್ ಅಂಟಿಸಲಾಗಿದೆ. ಇಷ್ಟೇ ಅಲ್ಲದೇ ಹತ್ತು ಹಲವು ಕಾರ್ಯಕ್ರಮಗಳನ್ನು ಜನವರಿ 29 ರ ಬೆಳಗ್ಗೆಯಿಂದ ವಿಷ್ಣುಸೇನಾ ಸಮಿತಿಯ ಸದಸ್ಯರು ಹಮ್ಮಿಕೊಂಡಿದ್ದಾರೆ.

ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅಭಿಮಾನಿಗಳು ಸಲಕ ಸಿದ್ಧತೆ ಮಾಡಿಕೊಂಡಿದ್ದು, ಸರಕಾರವು ಸ್ಮಾರಕ ಉದ್ಘಾಟನೆಯನ್ನು ಕೇವಲ ಸರಕಾರಿ ಕಾರ್ಯಕ್ರಮದಂತೆ ಹಮ್ಮಿಕೊಂಡಿದ್ದರೆ, ವಿಷ್ಣುಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಅಸಂಖ್ಯಾತ ಅಭಿಮಾನಿಗಳು ಜಾತ್ರೆಯಂತೆ ಭಾಸವಾಗುವಂತೆ ಸಿದ್ದತೆಯಲ್ಲಿ ತೊಡಗಿದ್ದಾರೆ.

ಜನವರಿ 29ರಂದು ವಾಹನ ಇಲ್ಲದವರಿಗಾಗಿಯೇ ಒಟ್ಟು 10 ಬಸ್ ಗಳನ್ನು ಆಯೋಜನೆ ಮಾಡಲಾಗಿದೆ. 5 ಬಸ್ ಗಳಲ್ಲಿ ಕುಂಭ ಹೊರುವ ಮತ್ತು ದೀಪೋತ್ಸವದಲ್ಲಿ ಭಾಗಿ ಆಗುವ ಹೆಣ್ಣುಮಕ್ಕಳಿಗೆ ಮೀಸಲಿಡಲಾಗಿದೆ. 300 ವಾಹನ ಜಾಥಾ, 100 ಕಟೌಟ್, ಸಾವಿರ ದೀಪೋತ್ಸವ ವ್ಯವಸ್ಥೆ ಮಾಡಲಾಗಿದೆ

ಮೈಸೂರಿನಲ್ಲಿ ಒಟ್ಟಾಗಿ ಅಲ್ಲಿಂದ ಮೂರು ಕೀಲೋ ಮೀಟರ್ ಜಾಥಾ ಹಮ್ಮಿಕೊಂಡು ಸ್ಮಾರಕ ತಲುಪಲಾಗುತ್ತದೆ. ಈ ಜಾಥಾದಲ್ಲಿ ವಿಷ್ಣುವರ್ಧನ್ ಅವರ ಗೀತೆಗಳು, ಜಾನಪದ ನೃತ್ಯ, ಜಾನಪದ ಕಲೆಗಳನ್ನು ಬಿಂಬಿಸುವಂತಹ ಯೋಜನೆ ಸಿದ್ಧತೆಯನ್ನು ಮಾಡಲಾಗಿದೆ.