ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : 330 ಗ್ರಾಮ ಪಂಚಾಯ್ತಿಗಳಲ್ಲಿ 'ಗ್ರಂಥಾಲಯ' ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : 330 ಗ್ರಾಮ ಪಂಚಾಯ್ತಿಗಳಲ್ಲಿ 'ಗ್ರಂಥಾಲಯ' ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಗ್ರಾಮೀಣ ಓದುಗರಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 5,633 ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯ್ತಿಗಳಿಗೆ ವರ್ಗಾಯಿಸಲಾಗಿರುತ್ತದೆ ಎಂದಿದ್ದಾರೆ.