ಕೊರೊನಾದಿಂದ ಮೃತಪಟ್ಟ ಪೊಲೀಸ್ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ

ಕೊರೊನಾದಿಂದ ಮೃತಪಟ್ಟ ಪೊಲೀಸ್ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ

ಬೆಂಗಳೂರು : ಕೊರೊನಾ ಸೋಂಕಿನಿಂದ ಮೃತಪಟ್ಟ ರಾಜ್ಯದ ಪೊಲೀಸರ ಕುಟುಂಬಗಳಿಗೆ ದೆಹಲಿ ಮೂಲದ ಮ್ಯಾನ್ ಕೈಂಡ್ ಫಾರ್ಮಾ ಕಂಪನಿಯಿಂದ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ 90 ಮೃತ ಪೊಲೀಸರ ಕುಟುಂಬದ ಸದಸ್ಯರಿಗೆ ಡಿಜಿಪಿ ಪ್ರವೀಣ್ ಸೂದ್ ಪರಿಹಾರದ ಚೆಕ್ ಗಳನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಪ್ರವೀಣ್ ಸೂದ್ ಅವರು, ಕೊರೊನಾದಿಂದ ಮೃತಪಟ್ಟ ಪೊಲೀಸರ ಕುಟುಂಬಗಳಿಗೆ ಸರ್ಕಾರ ತಲಾ 30 ಲಕ್ಷ ರೂ. ಪರಿಹಾರ ನೀಡಿದೆ. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಸಹ ನೀಡಲಾಗುತ್ತಿದೆ. ನಿಮ್ಮೊಂದಿಗೆ ಸರ್ಕಾರವಿದ್ದು, ಮುಂದೆಯೂ ಧೈರ್ಯದಿಂದ ಇರುವಂತೆ ಮೃತ ಪೊಲೀಸರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.