ರಾಜ್ಯಾದ್ಯಂತ 4 ದಿನ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ರಾಜ್ಯಾದ್ಯಂತ 4 ದಿನ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.