4 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ; PDO, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮಪಂಚಾಯಿತಿ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
4 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಶಾಲಾ ಕಾಂಪೌಂಡ್ ಕಾಮಗಾರಿಗೆ 4 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಭೀಮಪ್ಪ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿ ವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.