ಉತ್ತರಪ್ರದೇಶದಲ್ಲಿ ನಿಗೂಢ ಜ್ವರಕ್ಕೆ 50 ಮಕ್ಕಳು ಸಾವು

ಉತ್ತರಪ್ರದೇಶ : ಕಳೆದ ಒಂದೇ ವಾರದಲ್ಲಿ ಉತ್ತರಪ್ರದೇಶದಲ್ಲಿ ನಿಗೂಢ ಜ್ವರಕ್ಕೆ 50 ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ.
ಆಗ್ರಾ, ಫಿರೋಜಬಾದ್, ಮಥುರಾ, ಮಣಿಪುರ, ಇಟಾ ಹಾಗೂ ಕಾಸಗಂಜ್ ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಜ್ವರ, ಡೀಹೈಡ್ರೇಶನ್, ಪ್ಲೇಟಲೆಟ್‌ಗಳ ಹಠಾತ್ ಕುಸಿತದಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ನಿರ್ಲಕ್ಷ್ಯ ಧೋರಣೆ ಆರೋಪದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಫಿರೋಜಾಬಾದ್‌ನಲ್ಲಿ ಒಂದೇ ವಾರದಲ್ಲಿ 40 ಮಕ್ಕಳು ಮೃತಪಟ್ಟಿದ್ದು, ಅಲ್ಲಿನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ. ಜೊತೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವಂತೆ ಸೂಚಿಸಲಾಗಿದೆ. ಉತ್ತರ ಪ್ರದೇಶದ ಮನೆಮನೆಗಳಿಗೆ ತೆರಳುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.