6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ

6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ

ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಜ.1ರಿಂದ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.