6 ತಿಂಗಳ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಜೈಲಿಗೆ ಹೋಗೋದು ಫಿಕ್ಸ್ : ಬಿ.ಕೆ ಹರಿಪ್ರಸಾದ್ ವಾಗ್ಧಾಳಿ

ಚಿತ್ರದುರ್ಗ : ಗೃಹ ಸಚಿವರು ಈಗಾಗಲೇ ಜೈಲಿಗೆ ಹೋಗಲು ಸಿದ್ಧವಾಗಿದ್ದಾರೆ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ ಗರಂ ಕಿಡಿಕಾರಿದ್ದಾರೆ.
ಪರಪ್ಪನ ಅಗ್ರಹಾರ ಚೆನ್ನಾಗಿ ನೋಡಿಕೊಂಡು ಬಂದಿದ್ದಾರೆ.
ಪರೇಶ್ ಮೆಸ್ತಾ ಕೇಸ್ ಬಗ್ಗೆ' ಸುಳ್ಳು ಸುದ್ದಿ ಹಬ್ಬಿಸಿದವರನ್ನು ಬಂಧಿಸಿ ಎಂದು ಬಿಜೆಪಿ ವಿರುದ್ಧ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಸವಾಲ್ ಹಾಕಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಹಿನ್ನೆಲೆ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಈ ತಂತ್ರ ರೂಪಿಸಿದೆ. ಭ್ರಷ್ಟಾಚಾರ ಕೇಸಿನಲ್ಲಿ ಬಂಧಿತ ಐಪಿಎಸ್ ಅಧಿಕಾರಿ ನ್ಯಾಯಾಂಗ ತನಿಖೆಗೆ ಕೇಳಿದ್ದಾರೆ. ಎಲ್ಲವನ್ನೂ ಜಡ್ಜ್ ಎದುರು ಹೇಳುವುದಾಗಿ ಹೇಳಿದ್ದಾರೆ. ಆದರೆ, ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಿಲ್ಲ ಎಂದರು.