60 ಕ್ಷೇತ್ರಗಳಿಗೆ `ಕೈ' ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ : 35 ಕ್ಷೇತ್ರಗಳಿಗೆ ಇಬ್ಬರು ಆಕಾಂಕ್ಷಿಗಳ ಹೆಸರು ಶಿಫಾರಸ್ಸು

60 ಕ್ಷೇತ್ರಗಳಿಗೆ `ಕೈ' ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ : 35 ಕ್ಷೇತ್ರಗಳಿಗೆ ಇಬ್ಬರು ಆಕಾಂಕ್ಷಿಗಳ ಹೆಸರು ಶಿಫಾರಸ್ಸು

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಲಾಗಿತ್ತು. 2ನೇ ಪಟ್ಟಿಯಲ್ಲಿ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದರು.

ಈ ಬೆನ್ನಲ್ಲೇ 60 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದ್ದು, 35 ಕ್ಷೇತ್ರಗಳಿಗೆ ಇಬ್ಬರ ಹೆಸರನ್ನು ಶಿಫಾರಸ್ಸು ಮಾಡಿರೋದಾಗಿ ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಹಂಚಿಕೆ ಗೊಂದಲದ ಗೂಡಾಗಿದೆ. ಗುರುವಾರ ಟಿಕೆಟ್ ಆಕಾಂಕ್ಷಿಗಳ ಪರ ಅಭಿಮಾನಿಗಳು, ತಮ್ಮ ಮುಖಂಡನಿಗೆ ಟಿಕೆಟ್ ನೀಡುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ನಿವಾಸದ ಮುಂದೆ ಬೆಂಗಳೂರಿನಲ್ಲಿ ಹೈಡ್ರಾಮವನ್ನೇ ನಡೆಸಿದ್ದರು. ಈ ನಡುವೆ 100 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದರು.

ಈಗ 60 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ. 35 ಕ್ಷೇತ್ರಗಳಿಗೆ ಇಬ್ಬರು ಟಿಕೆಟ್ ಆಕಾಂಕ್ಷಿಗಳಿದ್ದು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂಬುದಾಗಿ ಕೆಪಿಸಿಸಿಯಿಂದ ಮಾಹಿತಿ ತಿಳಿದು ಬಂದಿದೆ.

ಆದ್ರೇ ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾತ್ರ ಇನ್ನೂ ಗೊಂದಲದ ಗೂಡಾಗಿಯೇ ಇದೆ. ಕಲಘಟಗಿ, ಮಂಗಳೂರು ಉತ್ತರ, ಪುಲಕೇಶಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಯಾರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗಲಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ.

ಇನ್ನೂ ಅಖಂಡ ಶ್ರೀನಿವಾಸಮೂರ್ತಿಗೆ ಮಾತ್ರ, ಕ್ಷೇತ್ರದಲ್ಲಿ ಟಿಕೆಟ್ ಗೆ ಸಿಂಗಲ್ ಹೆಸರು ಇದ್ದರೂ ಮತ್ತೆ ಕಾಯುವಂತೆ ಕಾಂಗ್ರೆಸ್ ನಾಯಕರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಸಂಪತ್ ರಾಜ್ ಹೆಸರಿದ್ದರೂ ಫೈನಲ್ ಮಾಡಿಲ್ಲ ಎನ್ನಲಾಗುತ್ತಿದೆ. ಆ ಬಗ್ಗೆ ಮತ್ತಷ್ಟು ಖಚಿತ ಮಾಹಿತಿ ತಿಳಿಯಬೇಕಿದೆ.