60 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರದಿಂದಲೇ ಕಣ್ಣಿನ ತಪಾಸಣೆ: ಸುಧಾಕರ್

ಹಾಸನ: 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರದಿಂದಲೇ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನಗರ ಕೇಂದ್ರಿತವಾಗಿ 100 ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತದೆ. ಹಾಸನದಲ್ಲಿ 5 ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಡಿ.14ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಈ ಕ್ಲಿನಿಕ್‌ಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.