7ನೇ ವೇತನ ಆಯೋಗ: ಮುಷ್ಕರಕ್ಕೆ ಮುಂದಾದ ಸರ್ಕಾರಿ ನೌಕರರಿಗೆ ಸಿಎಂ ಸಂದೇಶ; ಶೀಘ್ರದಲ್ಲಿ ಮಾತುಕತೆ

7ನೇ ವೇತನ ಆಯೋಗ: ಮುಷ್ಕರಕ್ಕೆ ಮುಂದಾದ ಸರ್ಕಾರಿ ನೌಕರರಿಗೆ ಸಿಎಂ ಸಂದೇಶ; ಶೀಘ್ರದಲ್ಲಿ ಮಾತುಕತೆ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್- ಹಳೆ ಪಿಂಚಣಿ ನೀತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದು, ಮುಷ್ಕರದ ಎಚ್ಚರಿಕೆ ನೀಡಿದೆ.

ಪ್ರತಿಭಟನೆ ಎಚ್ಚರಿಕೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ನೌಕರರ ಸಂಘದ ಜೊತೆ ಮಾತುಕತೆ ನಡೆಸಲು ತೀರ್ಮಾನಿಸಿದ್ದು, ಮುಷ್ಕರದಂತಹ ಆತುರದ ನಿರ್ಧಾರ ಬೇಡ ಎಂದು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.ಶುಕ್ರವಾರ ಸಿಎಂ ಬಸವರಾಜ್ ಬೊಮ್ಮಾಯಿ ನೌಕರರ ಸಂಘದ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಶೀಘ್ರದಲ್ಲಿಯೇ ಚರ್ಚೆ ನಡೆಸುವುದಾಗಿ ನೌಕರರ ಸಂಘದ ಪದಾಧಿಕಾರಿಗಳಿಗೆ ಸಿಎಂ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.