777 ಚಾರ್ಲಿ' ನೋಡಿ ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ

777 ಚಾರ್ಲಿ' ನೋಡಿ ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಾಣ ಮಾಡಿರೋ ಸಿನಿಮಾ 777 ಚಾರ್ಲಿ ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ . ಎಲ್ಲೆಡೆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 777 ಚಾರ್ಲಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ .

ನಗರದ ಒರಾಯನ್ ಮಾಲ್ ‌ ನಲ್ಲಿ ಮುಖ್ಯಮಂತ್ರಿ ಹಾಗೂ ಇತರ ಸಚಿವರಿಗೆ ವಿಶೇಷ ಸಿನಿಮಾ ಪ್ರದರ್ಶನ ಆಯೋಜಿಸಲಾಗಿದೆ . ಸಂಜೆ 7.30 ರ ಶೋಗೆ ಸಿಎಂ ಬೊಮ್ಮಾಯಿ ಜೊತೆಗೆ ಸಚಿವ ಆರ್ ಅಶೋಕ್ , ಬಿಸಿ ನಾಗೇಶ್ , ಶಾಸಕ ರಘುಪತಿ ಭಟ್ ಸೇರಿದಂತೆ ಕೆಲವರು ಸಾಥ್ ನೀಡಿದ್ದಾರೆ . ನಟ ರಕ್ಷಿತ್ ಶೆಟ್ಟಿ , ನಿರ್ದೇಶಕ ಕಿರಣ್ ರಾಜ್ ಕೂಡ ಸಿಎಂ ಜೊತೆ ಸಿನಿಮಾ ವೀಕ್ಷಿಸಿದ್ದಾರೆ .