8 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸರನಗದ್ದೆಯ ಮನೆಯ ಛಾವಣಿಯಲ್ಲಿ ಅಡಗಿದ್ದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಶಾಂತ ಹುಲೇಕಲ್ ಕ್ರಷ್ಣ ಆಚಾರಿ ಎಂಬುವವರು ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳ ಉಪಸ್ಥಿತಿಯಲ್ಲಿ ಶಿವಗಂಗಾ ಫಾಲ್ಸ್ ಬಳಿಯ ನಿರ್ಜನ ಪ್ರದೇಶದ ರಕ್ಷಿತಾರಣ್ಯದಲ್ಲಿ ಬಿಟ್ಟು ಬಂದಿದ್ದಾರೆ. ಈ ಸಂದರ್ಭದಲ್ಲಿ ಹುಲೇಕಲ್ ವಲಯ ಆರ್ಎಫ್ಒ ಮಂಜುನಾಥ ಹೆಬ್ಬಾರ, ಡಿವೈಆರ್ಎಫ್ಒ ರಾಘವೇಂದ್ರ ಹೆಗಡೆ, ಅರಣ್ಯ ರಕ್ಷಕ ರಾಜೇಶ ನಾಯ್ಕ, ದಾವಲಸಾಬ ಎರಗಟ್ಟಿ ಉಪಸ್ಥಿತರಿದ್ದರು.