ಕಲಬುರಗಿ ನಗರದಲ್ಲಿ ಎಸಿಬಿ ದಾಳಿ

ಆದಾಯ ಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಎಸಿಬಿ ದಾಳಿ ನಡೆಸಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆಯ ಜೆಇ ಮನೆ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೇ ಲೋಕೋಪಯೋಗಿ ಇಲಾಖೆ ಶಾಂತಗೌಡ ಬಿರಾದರ್ ಕಛೇರಿ,ಮನೆ, ತೋಟದ ಮನೆ ಮೇಲೆ ಎಸಿಬಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ನಗರದ ಗುಬ್ಬಿ ಕಾಲೋನಿಯಲ್ಲಿರೋ ಮನೆ ದಾಳಿ ನಡೆಸಿ, ದಾಖಲಾತಿಗಳ ಪರಿಶೀಲನೆ ನಡೆಸಿದ ಎಸಿಬಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಜೆಇ ಗಾಳ ಹಾಕಿದ್ದಾರೆ.