ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ - ಸಚಿವ ಸುನಿಲ್ ಕುಮಾರ್ | Bangalore |
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಂಗಾಯಣ ನಿರ್ದೇಶಕರುಗಳೊಂದಿಗೆ ವಿಕಾಸ ಸೌಧದಲ್ಲಿ ಸಭೆ ನಡೆಸಿ ಮಾತನಾಡುತ್ತಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ ಸೇರಿದಂತೆ ಎಲ್ಲ ಪ್ರಾಧಿಕಾರ ಮತ್ತು ಅಕಾಡೆಮಿಗಳ ಅಧ್ಯಕ್ಷರು, ಇಲಾಖೆ ಕಾರ್ಯದರ್ಶಿ ರವಿಶಂಕರ್ ಮತ್ತು ನಿರ್ದೇಶಕ ಎಸ್ ರಂಗಪ್ಪ ಹಾಜರಿದ್ದರು .