ಇತ್ತೀಚೆಗೆ ಸುರಿದ ಅಕಾಲಿಕ ಮಳೆಗೆ ಮನೆ ಹಾಗೂ ಬೆಳೆ ಕಳೆದುಕೊಂಡ ರೈತರ ಜಮೀನು ಹಾಗೂ ಬಿದ್ದ ಮನೆಗಳ ಸಮೀಕ್ಷೆಗೆ ಆಗಮಿಸಿದ ಕೃಷಿ ಸಚಿವ ಬಿ.ಸಿ .ಪಾಟೀಲ್ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆ ಹಾಗೂ ಬೆಳೆ ಕಳೆದುಕೊಂಡ ರೈತ ಸಮೂಹಕ್ಕೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರು. ಅನಂತರ ಮಾತನಾಡಿದ ಅವರು ನವಂಬರ್ ತಿಂಗಳಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದು ರೈತ ಸಮೂಹ ಹಾಗೂ ಬೆಳೆ ಕಳೆದುಕೊಳ್ಳುವಂತಾಗಿದೆ. ಅತಿ ಶೀಘ್ರದಲ್ಲಿ ಪರಿಹಾರದ ಹಣ ರೈತರ ಖಾತೆಗೆ ನೇರವಾಗಿ ಜಮಾ ಆಗಲಿದೆ ಮಳೆ ಹಾನಿ ಕಂದಾಯ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ನಡೆಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ನಗರ ಘಟಕದ ಅಧ್ಯಕ್ಷ ಬಸನಗೌಡ ರಾಮನಗೌಡ ರೈತ ಸಂಘದ ಅಧ್ಯಕ್ಷ ಬಸಲಿಂಗಪ್ಪ ನರಗುಂದ ರೈತ ಸಂಘದ ಅಧ್ಯಕ್ಷ ಮುತ್ತಣ್ಣ ಗುಡಿಗೇರಿ ಕೃಷಿ ಅಧಿಕಾರಿ ಬಿ.ಮಂಜುನಾಥ, ಸಹಾಯಕ ಕೃಷಿ ಅಧಿಕಾರಿ ಸುರೇಶ ಬಾಬು ದೀಕ್ಷಿತ, ರೈತ ಮುಖಂಡರು ಉಪಸ್ಥಿತರಿದ್ದರು