ನೈಜ ಕಾರ್ಮಿಕರಿಗೆ ಸಿಗದೆ ಮದ್ಯವರ್ತಿಗಳ ಪಾಲಾಗುತ್ತಿದೆ ಪ್ರೋತ್ಸಾಹಧನ, ಟೂಲ್ ಕಿಟ್ 

ಕೋಲಾರ

ಕೋಲಾರದ ಬಂಗಾರಪೇಟೆ ಪಟ್ಟಣದಲ್ಲಿ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ನೀಡುವ ಸರಕಾರದ ಸೌಲಭ್ಯಗಳು ಮದ್ಯವರ್ತಿಗಳ ಪಾಲಾಗುತ್ತಿದೆ ಎಂದು ಆರೋಪಿಸಿದ ಅವರು, ಮದ್ಯವರ್ತಿಗಳ ಕಾಟ ತಪ್ಪಿಸಿ ಕಾರ್ಮಿಕ ಇಲಾಖೆ ಕಚೇರಿಯನ್ನು ತಾಲ್ಲೂಕು ಆಡಳಿತದ ಮಿನಿವಿಧಾನಸೌಧ ಕಟ್ಟಡಕ್ಕೆ ಸ್ಥಳಾಂತರಿಸಬೇಕೆAದು ಒತ್ತಾಯಿಸಿದರು. ನಂತರ ತಾಲ್ಲೂಕು ಸಂಚಾಲಕ ಶ್ರೀನಿವಾಸ್ ಮನವಿ ಪತ್ರವನ್ನು ಕಾರ್ಮಿಕ ಇಲಾಖೆಯ ಅಧಿಕಾರಿ ರೇಣುಕಾ ಪ್ರಸಾದ ಅವರಿಗೆ ಸಲ್ಲಿಸಿದರು.