BIG NEWS : ಇಂದೇ ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ?

BIG NEWS : ಇಂದೇ ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ?

ಬೆಂಗಳೂರು : ಖಾತೆ ವಿಚಾರಕ್ಕೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ಇಂದು ಅಥವಾ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಆನಂದ್ ಸಿಂಗ್ ಅವರು ತಮಗೆ ನೀಡಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಬದಲಾಗಿ ಪ್ರಬಲ ಖಾತೆ ನೀಡುವಂತೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಖಾತೆ ಬದಲಾವಣೆ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಖಾತೆ ಬದಲಾವಣೆ ಮಾಡುವಂತೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಲವು ಬಾರಿ ಮನವೊಲಿಕೆಗೆ ಯತ್ನಿಸಿದ್ದರು, ಕೊಟ್ಟ ಖಾತೆಯನ್ನು ನಿಭಾಯಿಸುವಂತೆ ಸಲಹೆ ನೀಡಿದ್ದರು. ಆದರೆ ಆನಂದ್ ಸಿಂಗ್ ಬೊಮ್ಮಾಯಿ ಅವರಿಗೆ ಶಾಕ್ ಕೊಟ್ಟಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ತಮ್ಮ ಆಪ್ತ ಶಾಸಕ ರಾಜೂಗೌಡ ಮೂಲಕ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.