೫ನೇ ದಿನಕ್ಕೆ ಕಾಲಿರಿಸಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ | Bidar |

ಅಂಗನವಾಡಿ ನೌಕರರ ಸಂಘ ಸಿಐಟಿಯೂ ವತಿಯಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಗುರುವಾರವೂ ಮುಂದುವರಿದಿದೆ. ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಸುಶೀಲಾ ಹತ್ತಿ ಅವರ ನೇತೃತ್ವದಲ್ಲಿ ನೇರ ನಗದು ಹಣ ಮಂಜೂರಿ ಮಾಡಬೇಕು. ಕೊರೊನಾ ಸಮಯದಲ್ಲಿ ಕಾರ್ಯ ನಿರ್ವಹಿಸಿ ಕೊರೊನಾದಿಂದ ಮೃತಪಟ್ಟ ೧೬ ಜನರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.