ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗೆ ಮನವಿ

ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗೆ ಮನವಿ
ಬೆಂಗಳೂರು: ಭೋವಿ ಸಮುದಾಯಕ್ಕೆ ಸೇರಿದವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸ್ವಾಮೀಜಿ, ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಮನವರಿಕೆ ಮಾಡಿದರು. ಭೋಮಿ ಅಭಿವೃದ್ಧಿ ನಿಗಮಕ್ಕೆ ಮೂರು ವರ್ಷ ಕಳೆದರೂ ಅಧ್ಯಕ್ಷರ ನೇಮಕ ಮಾಡಿಲ್ಲ. ಪ್ರಾದೇಶಿಕ ನ್ಯಾಯದಡಿ ಕಲಬುರ್ಗಿ, ಬೆಳಗಾವಿ, ಮೈಸೂರು ಮತ್ತು ಮಧ್ಯ ಕರ್ನಾಟಕದಲ್ಲಿ ಕಚೇರಿಗಳನ್ನು ಆರಂಭಿಸುವುದರೊಳಗೆ ನಿರ್ದೇಶಕರನ್ನು ನೇಮಕ ಮಾಡಿ ಅಧ್ಯಕ್ಷರನ್ನು ಆಯ್ಕೆ ಮಾಡುವುದರೊಂದಿಗೆ ?೫೦೦ ಕೋಟಿ ಬಿಡುಗಡೆ ಮಾಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ಭೋವಿ ವಡ್ಡರಲ್ಲದವರು ಅನುದಾನ ಪಡೆಯುವುದನ್ನು ತಡೆಯುವ ದೃಷ್ಟಿಯಿಂದ ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ ವಡ್ಡರ ಅಭಿವೃದ್ಧಿ ನಿಗಮ ಎಂದು ಮರುನಾಮಕರಣ ಮಾಡಬೇಕು.ಭೋವಿ ಗುರುಪೀಠದಲ್ಲಿ ಭೋವಿ ಜನಾಂಗದ ಸಂಸ್ಕೃತಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪನೆ, ಭೋವಿ ನಿಗಮದಿಂದ ಕಟ್ಟಡ, ಕಲ್ಲುಕ್ವಾರೆ, ರಸ್ತೆ ಚರಂಡಿ, ಅರೆ ಅಲೆಮಾರಿ ಮತ್ತು ಭೂರಹಿತ ಭೋವಿ ವಡ್ಡರ ಕಾರ್ಮಿಕ ಸಮೀಕ್ಷೆ ನಡೆಸಿ ವಿಶೇಷ ಗುರುತಿಚ ಚೀಟು ವಿತರಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.